13.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಹಾಗೂ ಉಳಿದ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸ್ವಲ್ಪ ಮೋಡ ಮಾತ್ರ ಇರಬಹುದು. ಈಗಿನಂತೆ ಡಿ. 13ರಂದು ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದ್ದು, ರಾತ್ರಿಯ ತನಕ ಮುಂದುವರಿಯುವ ಸಾಧ್ಯತೆಗಳಿವೆ. ಹಾಸನ ಅಲ್ಲಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಮತ್ತು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ. 13ರಿಂದ ಮಳೆ ಕಡಿಮೆಯಾಗಿ 14ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪು, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಹಾಗೂ ನಂತರ ನಿರಂತರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ.13ರಂದು ಹಾವೇರಿ, ಧಾರವಾಡ ಸ್ವಲ್ಪ ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಶ್ರೀಲಂಕಾ ಉತ್ತರ – ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ದಕ್ಷಿಣ ಕೇರಳದ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿವೆ.
ಡಿ. 17ರಂದು ಇನ್ನೊಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಗಳಿದ್ದು, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ.…
11.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಅಧ್ಯಯನದ ಪ್ರಕಾರ, 2041-2050ರ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸೌರ ವಿಕಿರಣದ ಇಳಿಮುಖವಾಗುವ…
ಭಾರತದ ಡಿಜಿಟಲ್ ಮೂಲ ಸೌಕರ್ಯವು ಅಭೂತಪೂರ್ವ ಬೆಳವಣಿಗೆ ಸಾಧಿಸಿದ್ದು, ಇಲ್ಲಿಯವರೆಗೆ 138.34 ಕೋಟಿ…
ಪರಿಸರ ಆಧಾರಿತವಾದ ಹೂಡಿಕೆಗಳು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯ ಇದೆ. ಭವಿಷ್ಯದಲ್ಲಿ ಪರಿಸರ…