Advertisement
ವೆದರ್ ಮಿರರ್

ಹವಾಮಾನ ವರದಿ | 13.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ | ಡಿ.14ರಿಂದ ಬಿಸಿಲಿನ ವಾತಾವರಣದ ನಿರೀಕ್ಷೆ

Share

14.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಲ್ಲಿ ದಿನವಿಡೀ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ ದಿನದ ಬಹುಪಾಲು ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಡಿಸೆಂಬರ್ 14ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, 17ರಿಂದ ಮತ್ತೆ ಮೋಡದ ವಾತಾವರಣದ ಲಕ್ಷಣಗಳಿವೆ.

ಕೊಡಗು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, 17ರಿಂದ ಮೋಡ ಹಾಗೂ ಸಣ್ಣ ಪ್ರಮಾಣದ ಮಳೆಯ ಲಕ್ಷಣಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ.

ಶ್ರೀಲಂಕಾ ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಮತ್ತಷ್ಟು ದಕ್ಷಿಣಕ್ಕೆ ಚಲಿಸಿದ್ದು, ನಾಳೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಂದರ್ಭದಲ್ಲಿ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಡಿಸೆಂಬರ್ 17ರ ಸುಮಾರಿಗೆ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಒತ್ತಡದ ಪ್ರಮಾಣವು 1005hPa ಸನೀಹ ಇರುವುದರಿಂದ ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ ಇರಬಹುದು.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

16 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

17 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago