15.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಸುಳ್ಯ ತಾಲೂಕಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 17ರ ತನಕ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 17ರ ತನಕ ಮಲೆನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 16ರ ತನಕ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಅಂಡಮಾನ್ ನಿಕೋಬಾರ್ ಪಶ್ಚಿಮ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ವಾಯುಭಾರ (1002hPa) ಕುಸಿತವಾಗಿ ಡಿಸೆಂಬರ್ 18ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ ಇರಬಹುದು.
ತಮಿಳುನಾಡು ಕರಾವಳಿ ದಾಟಿ ಮುಂದೆ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ. ಹಾಗಾದರೆ ಮಾತ್ರ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯಬಹುದು. ಸಾಗುವ ಹಾದಿ ಕಾದು ನೋಡಬೇಕಾಗಿದೆ.