ಹವಾಮಾನ ವರದಿ | 17.12.2024 | ರಾಜ್ಯದಲ್ಲಿ ದೂರವಾದ ಮಳೆಯ ಆತಂಕ

December 17, 2024
11:59 AM

18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ, ಒಡಿಶಾ ಕರಾವಳಿ ಮೂಲಕ ಡಿ. 21ರಂದು ಪಶ್ಚಿಮ ಬಂಗಾಳ ಕರಾವಳಿ ತಲುಪಲಿದೆ. ಆದರೆ ಸಮುದಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ.

ಇದರ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಗೋಚರಿತ್ತಿಲ್ಲ. ಮಳೆಯ ಆತಂಕವೂ ದೂರವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ರೈತರು, ಕೃಷಿಕರು ಬೆಳೆಕಟಾವು ಕಾರ್ಯವನ್ನು ನಿರಾತಂಕವಾಗಿ ನಡೆಸಬಹುದು.

ಆದರೆ ಡಿ. 18ರಿಂದ 3 ದಿವಸಗಳ ಕಾಲ ಬೆಂಗಳೂರು ದಕ್ಷಿಣ ಸಹಿತ ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ, ಅರಬ್ಬಿ ಸಮುದ್ರದ ಕಡೆಯಿಂದ ಸ್ವಲ್ಪ ಮಟ್ಟಿಗೆ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿ. 20ರಿಂದ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror