18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ, ಒಡಿಶಾ ಕರಾವಳಿ ಮೂಲಕ ಡಿ. 21ರಂದು ಪಶ್ಚಿಮ ಬಂಗಾಳ ಕರಾವಳಿ ತಲುಪಲಿದೆ. ಆದರೆ ಸಮುದಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಈ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ, ಅರಬ್ಬಿ ಸಮುದ್ರದ ಕಡೆಯಿಂದ ಸ್ವಲ್ಪ ಮಟ್ಟಿಗೆ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿ. 20ರಿಂದ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…