ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |

December 21, 2024
11:35 AM

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿ. 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ. 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿ.24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಪಾವಗಢದ ಒಂದ ಕಡೆ ತುಂತುರು ಸಾಧ್ಯತೆ ಇದೆ). ಈಗಿನಂತೆ ಡಿ. 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿ. 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿ. 28ರಿಂದ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿ. 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ವಾಯುಭಾರ ಕುಸಿತವು ಡಿ. 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror