26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚನೆ ಇದೆ. ಮಂಗಳೂರಿನ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿ.28ರ ತನಕವೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಡಿ. 27ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ.26ರಂದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದರೆ, 27ರಂದು ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉತ್ತರ ಹಾಗೂ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕರ್ನಾಟಕ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ. 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.
ಡಿ.28ರಿಂದ ಮೋಡ ಹಾಗೂ ತುಂತುರು ಮಳೆಯ ಪ್ರಮಾಣ ಕಡಿಮೆಯಾಗಿ ಡಿ. 29 ಅಥವಾ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…