31.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿ.31ರಿಂದ ಮೋಡದ ವಾತಾವರಣ ಕಡಿಮೆಯಾಗಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಚಳಿಯೊಂದಿಗೆ ಒಣ ಹವೆ ಮುಂದುವರಿಯಲಿದೆ.
ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿ. 31ರಿಂದ ಒಣ ಹವೆ ಮುಂದುವರಿಯಲಿದೆ.
ಉತ್ತರ ಒಳನಾಡಿನಲ್ಲಿ ಚಳಿಯೊಂದಿಗೆ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ. 31ರಿಂದ ಒಣ ಹವೆ ಮುಂದುವರಿಯಲಿದೆ.
ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಚಳಿ ಗಾಳಿ ಬೀಸುತ್ತಿದ್ದರೂ, ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಗಾಳಿಯ ಬೀಸುತ್ತಿರುವ ಕಾರಣದಿಂದ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚಳಿ ಕಡಿಮೆಯಾಗಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಉಂಟಾಗಿದೆ.
ಡಿ.31ರಿಂದ ಮೋಡದ ವಾತಾವರಣ ಕಡಿಮೆಯಾದರೂ, ದಕ್ಷಿಣ ಕರ್ನಾಟಕದಲ್ಲಿ ಮುಂದಿನ ಮೂರು, ನಾಲ್ಕು ದಿನಗಳ ಕಾಲ ಸಾಮಾನ್ಯ ಚಳಿ ಮುಂದುವರಿಯುವ ಲಕ್ಷಣಗಳಿವೆ.
ಕೃಷಿ ಸಂಕಷ್ಟದಲ್ಲಿದೆ. ಬೆಳೆ ನಷ್ಟ ಹೆಚ್ಚಾಗುತ್ತಿದೆ. ಒಂದೋ ವಿಪರೀತ ಮಳೆ ಅಥವಾ ಬರಗಾಲ.…
ಭಾರತದ ರಫ್ತು ಪದಾರ್ಥಗಳಲ್ಲಿ ಕಾಫಿ ಮುಖ್ಯ ಬೆಳೆಗಳಲ್ಲಿ ಒಂದಾಗಿದ್ದು, 2021-22ನೇ ಸಾಲಿನಲ್ಲಿ ಒಂದು…
ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ರೈತರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು…
ಹೊಸ ವರ್ಷಾರಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 15…