Advertisement
ವೆದರ್ ಮಿರರ್

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?

Share

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಅಲ್ಲಲ್ಲಿ ಗಾಳಿಯ ಸಹಿತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನ ನಂತರ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಸ್ವಲ್ಪ ಜಾಸ್ತಿ ಇರಬಹುದು.ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಸಂಪೂರ್ಣವಾಗಿ ನಿಲ್ಲುವ ಸಾಧ್ಯತೆ ಕಾಣಿಸುತ್ತಿಲ್ಲ. ಇದೇ ರೀತಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಹೊರತು ಜೋರು ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

9 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

9 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

9 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

9 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

10 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago