Advertisement
ಸುದ್ದಿಗಳು

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

Share
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ.  ಈಗಿನಂತೆ ಆ.20ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಆ.19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.
ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಆ.19ರಿಂದ ದಕ್ಷಿಣ ಒಳನಾಡು ಮತ್ತು 20ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ತಿರುಗುವಿಕೆಯು ವಿಸ್ತರಣೆಯಾಗುತ್ತಿದ್ದು, ಆ. 18ರಿಂದ ಪೂರ್ವದಿಂದ ಬಂದ ಗಾಳಿಯು ಮತ್ತೆ ಪೂರ್ವಕ್ಕೆ ತಿರುಗುವಿಕೆಯು ಮುಂಬೈ ತೀರದಲ್ಲಿರುವುದರಿಂದ ಆ.18 ರಿಂದ 20ರ ತನಕ ಮುಂಬೈ ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

19 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

1 day ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 day ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

1 day ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

1 day ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago