Advertisement
ವೆದರ್ ಮಿರರ್

ಹವಾಮಾನ ವರದಿ | 13.09.2025 | ಇಂದು ಎಲ್ಲೆಲ್ಲಿ ಮಳೆಯಾಗಲಿದೆ…?

Share

14.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ದಿನದ ಹೆಚ್ಚಿನ ಅವಧಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಇರಬಹುದು. ಈಗಿನಂತೆ ಸೆ.15ರಿಂದ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕಡಿಮೆ ಇರಬಹುದು. ಹಾಸನ ಜಿಲ್ಲೆಯ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಒಂದೆರಡು ದಿನ ಅಲ್ಲಲ್ಲಿ ತುಂತುರು ಮಳೆಯ ಸೂಚನೆಗಳಿವೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಯಚೂರು ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಉತ್ತರ ಒಳನಾಡಿನಲ್ಲಿ ಸೆ. 16ರ ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಅಲ್ಲಲ್ಲಿ ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡಿನಲ್ಲಿ ಸೆ.19ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯ ವಾಯುಭಾರ ಕುಸಿತವು ಈಗಾಗಲೇ ಮಹಾರಾಷ್ಟ್ರ ತಲುಪಿದ್ದು ಸೆ.15ರ ತನಕ ಮಹಾರಾಷ್ಟ್ರದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾದರೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

9 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

16 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

18 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

23 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

23 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

1 day ago