ಹವಾಮಾನ ವರದಿ | 28.10.2025 | ಮೋಡ, ತುಂತುರು ಮಳೆ ಮುಂದುವರಿಕೆ

October 28, 2025
3:28 PM

29.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೋಡ ವಾತಾವರಣವು ನಾಳೆಯೂ ಮುಂದುವರಿಯಲಿದ್ದು, ಸಣ್ಣ ಪ್ರಮಾಣದ ಬಿಸಿಲು ಸಹ ಇರಬಹುದು. ಮಳೆಯ ಸಾಧ್ಯತೆ ಕಡಿಮೆಯಾಗಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅ.29ರಿಂದ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೋಡದ ವಾತಾವರಣ ನಾಳೆಯೂ ಮುಂದುವರಿಯಲಿದ್ದು, ನಂತರ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅ.29ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ತೀರದಲ್ಲಿದ್ದು, ಬಂಗಾಳಕೊಲ್ಲಿಯ ಚಂಡಮಾರುತವು ಆಂದ್ರಾ ಕರಾವಳಿಯಿಂದ ನಾಳೆ ಒಡಿಸ್ಸಾ ಕರಾವಳಿ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror