29.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೋಡ ವಾತಾವರಣವು ನಾಳೆಯೂ ಮುಂದುವರಿಯಲಿದ್ದು, ಸಣ್ಣ ಪ್ರಮಾಣದ ಬಿಸಿಲು ಸಹ ಇರಬಹುದು. ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅ.29ರಿಂದ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಉತ್ತರ ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೋಡದ ವಾತಾವರಣ ನಾಳೆಯೂ ಮುಂದುವರಿಯಲಿದ್ದು, ನಂತರ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅ.29ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ತೀರದಲ್ಲಿದ್ದು, ಬಂಗಾಳಕೊಲ್ಲಿಯ ಚಂಡಮಾರುತವು ಆಂದ್ರಾ ಕರಾವಳಿಯಿಂದ ನಾಳೆ ಒಡಿಸ್ಸಾ ಕರಾವಳಿ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…