20.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಡುಪಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ 20ರಂದು ಒಂದು ಬಿಡುವು ಪಡೆದು, 21ರಿಂದ ದಕ್ಷಿಣ ಕನ್ನಡ ಹಾಗೂ 22ರಿಂದ ಉಳಿದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. ಆಗುಂಬೆಯಲ್ಲೂ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ 20ರಂದು ಮಳೆ ಬಿಡುವು ಪಡೆದರೂ 22ರಿಂದ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು : ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನ. 22ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ನ. 22ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿರುವುದರಿಂದ ರಾಜ್ಯಕ್ಕೆ ಯಾವುದೇ ಪ್ರಭಾವ ಬೀರುವ ಸಾಧ್ಯತೆ ಕಡಿಮೆ ಇದೆ. ಆದರೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ. 22ರಂದು ತಮಿಳುನಾಡು ಕರಾವಳಿಗೆ ಸಮೀಪಿಸುವ ಸಾಧ್ಯತೆಗಳಿದ್ದು, ಇದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಉಂಟಾಗುವ ಲಕ್ಷಣಗಳಿವೆ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…