01.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 1 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿದ್ದು ಡಿಸೆಂಬರ್ 2 ರಿಂದ ಕರಾವಳಿ ಭಾಗಗಳಲ್ಲಿ ಸಹ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಡಿಸೆಂಬರ್ 10 ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ. ಈ ಮಧ್ಯೆ ಡಿಸೆಂಬರ್ 6, 7 ರಂದು ದಕ್ಷಿಣ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಲಕ್ಷಣಗಳಿವೆ.https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…