ವೆದರ್‌ ಮಿರರ್‌ | 13-03-2023 | ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಮಾ.14 ವಿವಿದೆಡೆ ಮಳೆ ಸಾಧ್ಯತೆ |

March 13, 2023
2:18 PM

14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 14ರಂದು ಸಹ ಸಂಜೆ ಕರಾವಳಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮಾರ್ಚ್ 15 ಹಾಗೂ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror