20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾದ ವರದಿಗಳಿವೆ. ಇದರ ಪ್ರಭಾವದಿಂದ ತೇವಾಂಶ ಅಧಿಕವಾಗಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 24ರ ನಂತರ ಮಳೆಯ ವಾತಾವರಣ ಗೋಚರಿಸುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…