08.01.2022ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಮುನ್ಸೂಚನೆ ಇದೆ. ಒಂದು ಅಂದಾಜಿನಂತೆ ಈ ವರ್ಷದ ಚಳಿಗಾಲವು ಇಲ್ಲಿಗೆ ಕೊನೆಯಾಗುವ ಸಾಧ್ಯತೆ ಕಾಣುತ್ತಿದೆ.
ಇವತ್ತು ಜಮ್ಮ ಕಾಶ್ಮೀರ ಭಾರೀ ಮಳೆಯ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ರಾಜ್ಯಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

