ವೆದರ್‌ ಮಿರರ್‌ | 03-04-2023 | ಎ.4 ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ ಇಲ್ಲ..! |

April 3, 2023
1:12 PM

4.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಸಂಜೆ ಮೋಡದ ವಾತಾವರಣ ಇರಲಿದ್ದು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಕೆಲವು ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 4 ರಿಂದ ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು, ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಬಿಸಿಲು ಹಾಗೂ ಮೋಡ ಮಾತ್ರ ಇರಬಹುದು. ಎಪ್ರಿಲ್ 6ರಿಂದ ರಾಜ್ಯದ ಕರಾವಳಿಯ ಹಲವೆಡೆ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಒಳನಾಡಿನ ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror