06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಕೊಡಗಿನಲ್ಲಿ ಇವತ್ತಿನಿಂದ ಮಳೆ ಪ್ರಾರಂಭವಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರೊಂದಿಗೆ ಎ. 6 ರಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 10 ದಿನಗಳ ಒಳಗಾಗಿ ಎರಡು, ಮೂರು ಮಳೆಯಾಗುವ ಲಕ್ಷಣಗಳಿವೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…