15.04.2023 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಸೇರಿದಂತೆ ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ಎಪ್ರಿಲ್ 15 ರಿಂದ ಕೊಡಗು ಹಾಗೂ ಕುದುರೆಮುಖ, ಶೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿಯಾದ್ಯಂತ ಉತ್ತಮ ಮಳೆಯು ಎಪ್ರಿಲ್ 20ರಿಂದ ಆರಂಭವಾಗುವ ಮುನ್ಸೂಚನೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…