ವೆದರ್‌ ಮಿರರ್‌ | 30-05-2023 | ಇಂದೂ ಸುಳ್ಯ,ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಮಳೆ….ಮಳೆ | ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದ ಲಕ್ಷಣ |

May 30, 2023
12:33 PM

31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿಯ ಅಲ್ಲಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಕೋಲಾರ, ಬೆಂಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ತಾಪಮಾನ ಏರಿಕೆಯಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ.

Advertisement

ಮುಂಗಾರು ಸ್ಥಿತಿ : ಅರಬ್ಬಿ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ ಇಲ್ಲದಿರುವುದು ಈಗಿನ ಪೂರ್ವದ ಮಳೆಗೆ ಅನುಕೂಲವಾಗಿದೆ. ಇದರಿಂದ ಮುಂಗಾರು ತಡವಾಗುವ ಆತಂಕವಿದೆ. ಈಗಿನ ಪ್ರಕಾರ ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror