31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿಯ ಅಲ್ಲಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಕೋಲಾರ, ಬೆಂಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ತಾಪಮಾನ ಏರಿಕೆಯಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ.
ಮುಂಗಾರು ಸ್ಥಿತಿ : ಅರಬ್ಬಿ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ ಇಲ್ಲದಿರುವುದು ಈಗಿನ ಪೂರ್ವದ ಮಳೆಗೆ ಅನುಕೂಲವಾಗಿದೆ. ಇದರಿಂದ ಮುಂಗಾರು ತಡವಾಗುವ ಆತಂಕವಿದೆ. ಈಗಿನ ಪ್ರಕಾರ ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಸಾಧ್ಯತೆ ಇದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.