ವೆದರ್‌ ಮಿರರ್‌ | 31-05-2023 | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆ ಸಾಧ್ಯತೆ |

May 31, 2023
11:08 AM

01.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು, ಎಚ್ಚರವಿರಲಿ. ದ. ಕ. ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಸ್ಥಿತಿ : ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ  ಉಂಟಾಗುವ ಲಕ್ಷಣಗಳಿದ್ದು, ಆ ನಂತರ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ, ಮುಂಗಾರು ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror