01.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು, ಎಚ್ಚರವಿರಲಿ. ದ. ಕ. ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಸ್ಥಿತಿ : ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಆ ನಂತರ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ, ಮುಂಗಾರು ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…