08.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಕೇರಳ, ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ (ಮುಂಗಾರು) ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತಾಪಮಾನ ಏರಿಕೆಯಿಂದ ಮುನ್ಸೂಚನೆಗೆ ಸಿಗದೆ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಸ್ಥಿತಿ ಹಾಗೂ ಚಂಡಮಾರುತ : ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಈಗಾಗಲೇ ಮುಂಗಾರು ರೀತಿಯ ಮೋಡದ ಚಲನೆಗಳು ಆರಂಭವಾಗಿದ್ದು, ಅಧಿಕೃತವಾಗಿ ಮುಂಗಾರು ಆಗಮನದ ಘೋಷಣೆ ಬಾಕಿ ಇದೆ.ಈಗಿನ ಅರಬ್ಬಿ ಸಮುದ್ರದ ಚಂಡಮಾರುತವು ಜೂನ್ 13, 14 ರಂದು ಒಮಾನ್ ಕಡಲ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…