ವೆದರ್‌ ಮಿರರ್‌ | 9 -6-2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ | ಕೇರಳದಲ್ಲಿ ಚುರುಕಾಗುತ್ತಿರುವ ಮುಂಗಾರು | ಕರಾಚಿ ಕಡೆಗೆ ಚಂಡಮಾರುತ |

June 9, 2023
10:48 AM
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ತಾಲ್ಲೂಕಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.  ಉಡುಪಿಯ ಕರಾವಳಿ ತೀರ ಹಾಗೂ ಕಾರ್ಕಳ ತಾಲ್ಲೂಕಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 
 ಮುಂಗಾರು ಪ್ರವೇಶಿಸುವ ಅಥವಾ ಚುರುಕಾಗುವ ಸಂದರ್ಭದಲ್ಲಿ ಸಮುದ್ರ ಅಲೆಗಳ ತೀವ್ರತೆ ಹಾಗೂ ಗಾಳಿಯ ವೇಗ ಹೆಚ್ಚಿರುವುದು ಸಾಮಾನ್ಯ. ಚಂಡಮಾರುತದ ಪ್ರಭಾವ ಮುಂಗಾರು ಮೇಲಿದೆ ಹೊರತು ರಾಜ್ಯದ ಕರಾವಳಿಗಲ್ಲ.
ಕೊಡಗು, ಚಿಕ್ಕಮಗಳೂರು ಅಲ್ಲಲ್ಲಿ, ತುಮಕೂರು, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ ಹಾಗೂ ಕೊಪ್ಪಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದಿಂದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಹಾಗೂ ಚಂಡಮಾರುತ :  ಮುಂಗಾರು ಈಗಾಗಲೇ ಕೇರಳದಲ್ಲಿ ಸ್ವಲ್ಪ ಚುರುಕಾಗಿದ್ದು, ಇವತ್ತು ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಆದರೆ *ಮುಂಗಾರು ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗಲಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಚಂಡಮಾರುತ ಶಿಥಿಲಗೊಂಡ ನಂತರ ಚಿತ್ರಣ ಬದಲಾಗಬಹುದು.*ಅರಬ್ಬಿ ಸಮುದ್ರದಲ್ಲಿನ ಚಂಡಮಾರುತವು ಜೂನ್ 14 ರಂದು ಪಾಕಿಸ್ತಾನದ ಕರಾಚಿಗೆ ಅಪ್ಪಳಿಸುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror