Advertisement
ವೆದರ್ ಮಿರರ್

ವೆದರ್‌ ಮಿರರ್‌ | 9 -6-2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ | ಕೇರಳದಲ್ಲಿ ಚುರುಕಾಗುತ್ತಿರುವ ಮುಂಗಾರು | ಕರಾಚಿ ಕಡೆಗೆ ಚಂಡಮಾರುತ |

Share
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ತಾಲ್ಲೂಕಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.  ಉಡುಪಿಯ ಕರಾವಳಿ ತೀರ ಹಾಗೂ ಕಾರ್ಕಳ ತಾಲ್ಲೂಕಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಪ್ರವೇಶಿಸುವ ಅಥವಾ ಚುರುಕಾಗುವ ಸಂದರ್ಭದಲ್ಲಿ ಸಮುದ್ರ ಅಲೆಗಳ ತೀವ್ರತೆ ಹಾಗೂ ಗಾಳಿಯ ವೇಗ ಹೆಚ್ಚಿರುವುದು ಸಾಮಾನ್ಯ. ಚಂಡಮಾರುತದ ಪ್ರಭಾವ ಮುಂಗಾರು ಮೇಲಿದೆ ಹೊರತು ರಾಜ್ಯದ ಕರಾವಳಿಗಲ್ಲ.
ಕೊಡಗು, ಚಿಕ್ಕಮಗಳೂರು ಅಲ್ಲಲ್ಲಿ, ತುಮಕೂರು, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ ಹಾಗೂ ಕೊಪ್ಪಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದಿಂದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಹಾಗೂ ಚಂಡಮಾರುತ : ಮುಂಗಾರು ಈಗಾಗಲೇ ಕೇರಳದಲ್ಲಿ ಸ್ವಲ್ಪ ಚುರುಕಾಗಿದ್ದು, ಇವತ್ತು ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಆದರೆ *ಮುಂಗಾರು ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗಲಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಚಂಡಮಾರುತ ಶಿಥಿಲಗೊಂಡ ನಂತರ ಚಿತ್ರಣ ಬದಲಾಗಬಹುದು.*ಅರಬ್ಬಿ ಸಮುದ್ರದಲ್ಲಿನ ಚಂಡಮಾರುತವು ಜೂನ್ 14 ರಂದು ಪಾಕಿಸ್ತಾನದ ಕರಾಚಿಗೆ ಅಪ್ಪಳಿಸುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

1 hour ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

7 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

7 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

7 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

7 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago