05.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ತೀರ ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯೂ ಇದೆ.
ಈ ವರ್ಷ ಇದೇ ಮೊದಲಬಾರಿ ರಾಜ್ಯದಾದ್ಯಂತ ಇವತ್ತು ಮುಂಗಾರು ಚುರುಕಾಗಿರುವ ಮುನ್ಸೂಚನೆ ಇದೆ ಮತ್ತು ಜುಲೈ 6ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳೂ ಇವೆ. ಈಗ ಚುರುಕುಗೊಂಡ ಮುಂಗಾರು ಇನ್ನೆರಡು ದಿನಗಳಲ್ಲಿ ಅಂದರೆ ಜುಲೈ 6 ರಿಂದ ಒಳನಾಡು ಭಾಗಗಳಲ್ಲಿ ದುರ್ಬಲಗೊಳ್ಳುವ ಸಾಧ್ಯತೆ ಇದ್ದು.ಜುಲೈ 10 ರಿಂದ ಕರಾವಳಿ ಭಾಗಗಳಲ್ಲಿ ಸಹ ದುರ್ಬಲಗೊಳ್ಳುವ ಲಕ್ಷಣಗಳಿವೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel