10.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆಯಾಗಿದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು ಉತ್ತರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಮತ್ತೆ ದುರ್ಬಲವಾಗುವ ಲಕ್ಷಣಗಳಿದ್ದು, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಇವತ್ತಿನಿಂದ ಜುಲೈ 11ರ ತನಕ ಅವಕಾಶ ಸಿಗಬಹುದು. ಆದರೂ ದಿನಕ್ಕೆ ಒಂದೆರಡು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮುಂಗಾರು ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ.