#WeatherMirror | 09-07-2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ | ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆ | ಮುಂಗಾರು ಮತ್ತೆ ದುರ್ಬಲವಾಗುವ ಲಕ್ಷಣ |

July 9, 2023
12:23 PM
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆಯಾಗಿದೆ. ಮತ್ತೆ ಮುಂಗಾರು ದುರ್ಬಲವಾಗುವ ಲಕ್ಷಣಗಳು ಇವೆ.

10.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಮಳೆಯ ತೀವ್ರತೆ ಗಣನೀಯವಾಗಿ ಇಳಿಕೆಯಾಗಿದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು ಉತ್ತರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಮತ್ತೆ ದುರ್ಬಲವಾಗುವ ಲಕ್ಷಣಗಳಿದ್ದು, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಇವತ್ತಿನಿಂದ ಜುಲೈ 11ರ ತನಕ ಅವಕಾಶ ಸಿಗಬಹುದು. ಆದರೂ ದಿನಕ್ಕೆ ಒಂದೆರಡು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮುಂಗಾರು ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror