#WeatherMirror | 10-07-2023 | ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ | ದುರ್ಬಲಗೊಂಡ ಮುಂಗಾರು |

July 10, 2023
11:21 AM
ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಸಾಧ್ಯತೆ ಇದೆ. ಮುಂಗಾರು ಮಾರುತ ಮತ್ತೆ ದುರ್ಬಲವಾಗಿದೆ.ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಅವಕಾಶ ಇದೆ.

11.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕೊಡಗು, ಮೈಸೂರು ಉತ್ತರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಅವಕಾಶ ಇದೆ. ಜುಲೈ 12 ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದರೂ ಈಗಿನ ಮುನ್ಸೂಚನೆಯಂತೆ ಜುಲೈ 15ರಿಂದ ಮತ್ತೆ ಕರಾವಳಿ ಭಾಗಗಳಲ್ಲಿ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಈ ವೇಳೆಗೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror