11.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕೊಡಗು, ಮೈಸೂರು ಉತ್ತರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಅವಕಾಶ ಇದೆ. ಜುಲೈ 12 ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿದ್ದರೂ ಈಗಿನ ಮುನ್ಸೂಚನೆಯಂತೆ ಜುಲೈ 15ರಿಂದ ಮತ್ತೆ ಕರಾವಳಿ ಭಾಗಗಳಲ್ಲಿ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಈ ವೇಳೆಗೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…