22.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ಗಾಳಿಯ ರಭಸ ಕಡಿಮೆಯಾದರೆ ಉತ್ತಮ ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾದರೆ ಮಲೆನಾಡು ಭಾಗಗಳಲ್ಲಿ ತೀವ್ರತೆ ಸ್ವಲ್ಪ ಕಡಿಮೆ ಆಗಬಹುದು
ಹಾವೇರಿ ಸಾಮಾನ್ಯ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಚುರುಕಾಗಿದ್ದು ಜುಲೈ 21 ರಿಂದ ಜುಲೈ 26 ಅಥವಾ 27 ರ ತನಕ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಜು.28 ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.