#WeatherMirror | 22-07-2023 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ | ಜು.26 ರವರೆಗೂ ಉತ್ತಮ ಮಳೆ ಸಾಧ್ಯತೆ |

July 22, 2023
2:06 PM
ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ರಾಜ್ಯದ ಇತರ ಕಡೆಗಳಲ್ಲಿ ಸಾಮಾನ್ಯ ಮಳೆ. ಕೆಲವು ಕಡೆ ನಿರೀಕ್ಷಿತ ಮಳೆ ಇಲ್ಲ. ಜು.26 ರ ನಂತರ ಮತ್ತೆ ಮುಂಗಾರು ದುರ್ಬಲ ಸಾಧ್ಯತೆ.

23.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಕಡಿಮೆಯಾಗಿದ್ದರಿಂದ ಮಳೆ ಹೆಚ್ಚಾಗಬಹುದು. ಕೊಡಗು (ಉತ್ತಮ) , ಚಿಕ್ಕಮಗಳೂರು, ಶಿವಮೊಗ್ಗ ಸಹ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಳೆ ಹೆಚ್ಚಿರುವುದರಿಂದ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆ.

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಜುಲೈ 26 ರ ತನಕ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಲಿದ್ದು ಜು.28 ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror