24.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು ಜುಲೈ 27ರ ತನಕ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…