27.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನವಿಡೀ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಜೋರಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಮುಂಗಾರು ರಾಜ್ಯದಾದ್ಯಂತ ಉತ್ತಮ ಸ್ಥಿತಿಯಲ್ಲಿದ್ದು ಜುಲೈ 28ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಜುಲೈ 30ರ ತನಕ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಇದ್ದರೆ ನಂತರ ಮತ್ತಷ್ಟು ದುರ್ಬಲಗೊಳ್ಳವ ಸಾಧ್ಯತೆ ಇದೆ.
ಒಡಿಶಾ, ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಇವತ್ತು ಸಂಜೆ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…