#WeatherMirror | 27-07-2023 | ಕರಾವಳಿಯಲ್ಲಿ ತಗ್ಗಿದ ಮಳೆಯ ಅಬ್ಬರ | ಕೆಲವು ಜಿಲ್ಲೆಗಳಲ್ಲಿ ಮಳೆ | ಜು.28 ರಿಂದ ಮತ್ತೆ ಮುಂಗಾರು ದುರ್ಬಲ |

July 27, 2023
10:27 AM
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಯಾದಗಿರಿ ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆ ಸಾಧ್ಯತೆ ಇದೆ. ಜು.28 ರಿಂದ ಮುಂಗಾರು ಮತ್ತೆ ದುರ್ಬಲವಾಗಲಿದೆ.

28.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಇದ್ದರೆ ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ (REDALERT), ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಳ್ಳುತ್ತಿದ್ದು, ಜುಲೈ 28ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಲಿದೆ. ಜುಲೈ 30ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror