#WeatherMirror | 29-07-2023 | ಕರಾವಳಿ ಜಿಲ್ಲೆಗಳಾದ್ಯಂತ ಕಡಿಮೆ ಮಳೆ | ಆ. 6ರ ತನಕವೂ ಸಾಮಾನ್ಯ ಮಳೆ ನಿರೀಕ್ಷೆ |

July 29, 2023
10:13 AM
ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆ.6 ರ ತನಕ ಸಾಮಾನ್ಯ ಮಳೆ ನಿರೀಕ್ಷೆ.

30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಒಂದೆರಡು ಮಳೆ ಹೆಚ್ಚಿರಬಹುದು.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲವಾಗಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ. ಕರಾವಳಿ ಭಾಗಗಳಲ್ಲಿ ಆ. 6 ರ ತನಕ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror