30.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬೆಳಿಗ್ಗೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆ ಇದ್ದರೆ ಮಧ್ಯಾಹ್ನ ಮೇಲೆ ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು – ತಮಿಳುನಾಡು ಗಡಿಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ, ಚಾಮರಾಜನಗರ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೋಡಗಳು ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕುಕ್ಕೆಸುಬ್ರಹ್ಮಣ್ಯ ಹಾಗೂ ಮಡಿಕೇರಿ ಘಾಟಿಯ ಕೆಳಗಿನ ದಕ್ಷಿಣ ಕನ್ನಡ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಬಹುದು. (ನಿನ್ನೆಯ ಜಲಸ್ಫೋಟದ ಕಾರಣವೂ ಇದಾಗಿರಬಹುದು)
ರಾಜ್ಯದ ಈಗಿನ ಈ ವಾತಾವರಣವು ಇನ್ನೂ ಒಂದು ವಾರ ಕಾಲ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…