#WeatherMirror | 01 :08 : 2023 | ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು | ಮುಂದುವರಿದ ಮುಂಗಾರು ದುರ್ಬಲತೆ | ಆ.6 ರ ನಂತರ ಮಳೆಯ ತೀವ್ರತೆ ಕಡಿಮೆ

August 1, 2023
11:08 AM
ಮುಂಗಾರು ದುರ್ಬಲತೆ ಮುಂದಿವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಇರಲಿದೆ, ಕೆಲವು ಕಡೆ ಮಳೆಯಾಗಬಹುದು. ಆ.6 ನಂತರ ಮಳೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.

02.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ದಿನದಲ್ಲಿ 2 ಅಥವಾ 3 ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇವತ್ತು ತಡರಾತ್ರಿ ಶಿಥಿಲಗೊಳ್ಳುವ ಲಕ್ಷಣಗಳಿವೆ.ವಾಯುಭಾರ ಕುಸಿತಕ್ಕೆ ಪೂರಕವಾದ ಗಾಳಿಯು ಕೇರಳ, ತಮಿಳುನಾಡು ದಕ್ಷಿಣ ತುದಿಯ ಸಮುದ್ರದ ಮೂಲಕ ಸೆಳೆಯುತ್ತಿರುವುದರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಅಷ್ಟೇನು ಪರಿಣಾಮವಿಲ್ಲ. ಆದರೆ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಅದರಲ್ಲೂ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಹೆಚ್ಚಿರುವ ಸಾಧ್ಯತೆ ಇದೆ. ಆ. 6ರ ನಂತರ ಕರಾವಳಿಯಲ್ಲಿಯೂ ಮಳೆಯ ತೀವ್ರತೆ ಇನ್ನಷ್ಟು ಕಡಿಮೆಯಾಗುವ ಲಕ್ಷಣಗಳಿವೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group