02.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ದಿನದಲ್ಲಿ 2 ಅಥವಾ 3 ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇವತ್ತು ತಡರಾತ್ರಿ ಶಿಥಿಲಗೊಳ್ಳುವ ಲಕ್ಷಣಗಳಿವೆ.ವಾಯುಭಾರ ಕುಸಿತಕ್ಕೆ ಪೂರಕವಾದ ಗಾಳಿಯು ಕೇರಳ, ತಮಿಳುನಾಡು ದಕ್ಷಿಣ ತುದಿಯ ಸಮುದ್ರದ ಮೂಲಕ ಸೆಳೆಯುತ್ತಿರುವುದರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಅಷ್ಟೇನು ಪರಿಣಾಮವಿಲ್ಲ. ಆದರೆ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಅದರಲ್ಲೂ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಹೆಚ್ಚಿರುವ ಸಾಧ್ಯತೆ ಇದೆ. ಆ. 6ರ ನಂತರ ಕರಾವಳಿಯಲ್ಲಿಯೂ ಮಳೆಯ ತೀವ್ರತೆ ಇನ್ನಷ್ಟು ಕಡಿಮೆಯಾಗುವ ಲಕ್ಷಣಗಳಿವೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…