#WeatherMirror | ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು | ಮುಂಗಾರು ಅತಿ ದುರ್ಬಲವಾಗಿದೆ | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ |

August 3, 2023
11:12 AM
ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ದುರ್ಬಲ ಮುಂಗಾರು ಮುಂದುವರಿದಿದೆ. ಮುಂದಿನ 10 ದಿನಗಳವರೆಗೂ ಮಳೆ ಪ್ರಮಾನ ಕಡಿಮೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಮಧ್ಯಪ್ರದೇಶದ ಸುತ್ತಮತ್ತ ಭಾರೀ ಮಳೆಯ ನಿರೀಕ್ಷೆ ಇದೆ.

04.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡ, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಅತಿ ದುರ್ಬಲವಾಗಿದ್ದು, ಕರಾವಳಿಯಲ್ಲಿ ಅಲ್ಲಲ್ಲಿ ಆ. 5ರ ತನಕ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆ.6ರಿಂದ ಕರಾವಳಿ ಭಾಗಗಳಲ್ಲಿಯೂ ಮಳೆ ಸಾಂಕೇತಿಕವಾಗಿ ಒಂದೆರಡು ಸಾಮಾನ್ಯ ಮಳೆ ಮಾತ್ರ ಇರಬಹುದು. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಉಳಿಕೆ ಅಂಶವು ಮಧ್ಯಪ್ರದೇಶ, ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿದ್ದು, ಉತ್ತಮ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶದ ಜಗಲ್ಪುರ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ . ಜಾರ್ಖಂಡ್ ನಲ್ಲೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror