04.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡ, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಅತಿ ದುರ್ಬಲವಾಗಿದ್ದು, ಕರಾವಳಿಯಲ್ಲಿ ಅಲ್ಲಲ್ಲಿ ಆ. 5ರ ತನಕ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆ.6ರಿಂದ ಕರಾವಳಿ ಭಾಗಗಳಲ್ಲಿಯೂ ಮಳೆ ಸಾಂಕೇತಿಕವಾಗಿ ಒಂದೆರಡು ಸಾಮಾನ್ಯ ಮಳೆ ಮಾತ್ರ ಇರಬಹುದು. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಉಳಿಕೆ ಅಂಶವು ಮಧ್ಯಪ್ರದೇಶ, ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿದ್ದು, ಉತ್ತಮ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶದ ಜಗಲ್ಪುರ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ . ಜಾರ್ಖಂಡ್ ನಲ್ಲೂ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…