09.08. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಕಡಿಮೆ ಇದ್ದರೂ ಬರುವ ಮಳೆಯ ರಭಸ ಹೆಚ್ಚಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ
ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ. 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಷ್ಣಾಂಶ ಏರಿಕೆಯಿಂದಾಗಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…