#WeatherMirror | 16-08-2023 | ಕರಾವಳಿ ಪ್ರದೇಶಗಳಲ್ಲಿ ಬಿಸಿಲು | ಮುಂಗಾರು ದುರ್ಬಲತೆ ಮುಂದುವರಿಕೆ | ಆ.18-21 ಅಲ್ಲಲ್ಲಿ ಮಳೆ ಸಾಧ್ಯತೆ |

August 16, 2023
2:11 PM
ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಕಡೆ ಬಿಸಿಲಿನ ವಾತಾವರಣ ಮುಂದುವರಿದಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.

17.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಉತ್ತರ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಗದಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಭಾಗಗಳಲ್ಲಿ ಒಂದೆರಡು ಸೀಮಿತ ಪ್ರದೇಶದಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ರಿಂದ 21 ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ನಂತರ ಮತ್ತೆ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-11-2026 | ಅಕ್ವಾನ್ ಚಂಡಮಾರುತ ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ
November 16, 2026
2:56 PM
by: ಸಾಯಿಶೇಖರ್ ಕರಿಕಳ
ಹೆಚ್ಚಿನ ಇಳುವರಿಗಷ್ಟೇ ಆದ್ಯತೆ ಬೇಡ, ಪೋಷಕಾಂಶ ಸಮರ್ಥ ಬೆಳೆಗಳತ್ತ ಗಮನ ಹರಿಸಿ
November 16, 2026
11:32 AM
by: ದ ರೂರಲ್ ಮಿರರ್.ಕಾಂ
Rubber sheets and rubber tapping in India amid falling natural rubber prices
ರಬ್ಬರ್ ಬೆಲೆಯಲ್ಲಿ ಮತ್ತೆ ಇಳಿಕೆ : 15 ದಿನಗಳಲ್ಲಿ ಕೆ.ಜಿಗೆ ₹17 ಕುಸಿತ
November 16, 2026
10:31 AM
by: ದ ರೂರಲ್ ಮಿರರ್.ಕಾಂ
ನವೆಂಬರ್ 20 ರಿಂದ 22 ರವರೆಗೆ ಉತ್ತರ ಕರ್ನಾಟಕದ ಕೆಲವೆಡೆ ಮಳೆ ಮುನ್ಸೂಚನೆ
November 16, 2026
9:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror