WeatherMirror | 25-08-2023 | ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ | ಅಕ್ಟೋಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶ‌ | ಈ ಬಾರಿ ಎಲ್ಲಿಯವರೆಗೆ ಹಿಂಗಾರು..?

August 25, 2023
11:01 AM
ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಅಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಲಕ್ಷಣಗಳಿವೆ. ಜನವರಿಯ ಮಧ್ಯ ಅಥವಾ ಕೊನೇಯ ತನಕವೂ ಹಿಂಗಾರು ಮುಂದುವರಿಯುವ ಸಾಧ್ಯತೆ ಇದೆ.

26.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಆಗುಂಬೆ ಹಾಗೂ ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಹೆಚ್ಚಿದೆ.ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಪ್ರಕಾರ ಸೆಪ್ಟೆಂಬರ್ 3ನೇ ವಾರದಲ್ಲಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಬಹುದು. ಅಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಲಕ್ಷಣಗಳಿವೆ. ಜನವರಿಯ ಮಧ್ಯ ಅಥವಾ ಕೊನೇಯ ತನಕವೂ ಹಿಂಗಾರು ಮುಂದುವರಿಯುವ ಸಾಧ್ಯತೆ ಇದೆ. ಒಂದು ಮಾಹಿತಿಯಂತೆ ಹಿಂಗಾರು ಸಹ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ತೋರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror