29.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 6 ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ದಿನ ಬಿಟ್ಟು ದಿನ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…