31.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಭಾಗಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲಗೊಂಡು ಗಾಳಿಯ ದಿಕ್ಕು ಬದಲಾಗಿದ್ದರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗಬಹುದು. ಆದರೂ ಮೈಸೂರು , ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ರಾಯಚೂರು ಬಿಸಿಲು, ಮೋಡ ಮಾತ್ರ ಇರಬಹುದು.
ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಪಾವಗಡ, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…