Advertisement
ಸುದ್ದಿಗಳು

#ವೆದರ್‌ಮಿರರ್‌ |30 – 8 -2022 | ಕೆಲವೆಡೆ ಉತ್ತಮ ಮಳೆ ಸಾಧ್ಯತೆ | ದುರ್ಬಲಗೊಂಡ ಮುಂಗಾರು |

Share

31.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಭಾಗಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಂಡು ಗಾಳಿಯ ದಿಕ್ಕು ಬದಲಾಗಿದ್ದರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗಬಹುದು. ಆದರೂ ಮೈಸೂರು , ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ರಾಯಚೂರು ಬಿಸಿಲು, ಮೋಡ ಮಾತ್ರ ಇರಬಹುದು.
ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಪಾವಗಡ, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

2 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

10 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago